ಚೆನ್ನೈ: ತಮಿಳುನಾಡು ಮೀಸಲಾತಿಯಡಿ ಸೀಟು ಪಡೆದ ವಿದ್ಯಾರ್ಥಿಗಳ ವೃತ್ತಿಪರ ಕೋರ್ಸ್ ಶುಲ್ಕ ಮನ್ನಾ ಮಾಡಲು ತಮಿಳುನಾಡು ಸರ್ಕಾರ ತೀರ್ಮಾನಿಸಿದೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಆದೇಶ ನೀಡಿ ಮಾತನಾಡಿ, ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಸುಮಾರು 10 ಸಾವಿರ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ವೃತ್ತಿಪರ ಶಿಕ್ಷಣ ಕಲಿಯಲಿದ್ದು, ಅವರ ಟ್ಯೂಷನ್ ಶುಲ್ಕ ಸೇರಿದಂತೆ ಹಲವು ಶುಲ್ಕಗಳನ್ನು ಸರ್ಕಾರ ಭರಿಸಲು ತೀರ್ಮಾನಿಸಿದೆ ಎಂದು ತಿಳಿಸಿದ್ದಾರೆ.
ಈ ವಿದ್ಯಾರ್ಥಿಗಳೊಂದಿಗೆ ಕೃಷಿ, ಪಶುವೈದ್ಯಕೀಯ, ಮೀನುಗಾರಿಕೆ, ಕಾನೂನು ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಪ್ರವೇಶ ಪಡೆಯಲಿರುವ 350 ವಿದ್ಯಾರ್ಥಿಗಳ ಟ್ಯೂಷನ್ ಶುಲ್ಕ, ಹಾಸ್ಟೆಲ್ ಫೀ, ಕೌನ್ಸೆಲಿಂಗ್ ಶುಲ್ಕವನ್ನು ಸರ್ಕಾರ ಪಾವತಿಸಲಿದೆ ಎಂದು ಹೇಳಿದ್ದಾರೆ.
ಇತ್ತೀಚೆಗಷ್ಟೇ ಸರ್ಕಾರಿ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ ನಲ್ಲಿ ಶೇಕಡ 7.5 ರಷ್ಟು ಮೀಸಲಾತಿಯನ್ನು ತಮಿಳುನಾಡು ಸರ್ಕಾರ ನೀಡಿದೆ.