ನವದೆಹಲಿ: ದೆಹಲಿಯಲ್ಲಿ ಮೊದಲ ಹಂತದಲ್ಲಿ 50 ಲಕ್ಷ ಆರೋಗ್ಯ ಕಾರ್ಯಕರ್ತರಿಗೆ ಕೊರೋನಾ ಲಸಿಕೆ ನೀಡಲಾಗುವುದು. ಈಗಾಗಲೇ ಕೊರೋನಾ ವಾರಿಯರ್ಸ್ ಗಳ ಪಟ್ಟಿಯನ್ನು ಸಿದ್ದಪಡಿಸಲಾಗುತ್ತಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೇಜ್ರಿವಾಲ್, ದೆಹಲಿ ಸರ್ಕಾರ ಲಸಿಕೆ ವಿತರಣೆಗಾಗಿ ಸಕಲ ಸಿದ್ಧತೆ ಕೈಗೊಂಡಿದೆ. ಮೊದಲಿಗೆ 51 ಲಕ್ಷ ಜನರಿಗೆ ಲಸಿಕೆ ನೀಡಲಿದ್ದು, ಪ್ರತಿ ವ್ಯಕ್ತಿಗೆ ಎರಡು ಡೋಸ್ ಲಸಿಕೆ ನೀಡಲಾಗುವುದು. ಲಸಿಕೆ ಸಂಗ್ರಹಿಸುವ ಸಾಮರ್ಥ್ಯವನ್ನು ಹೆಚ್ಚಿಸಲಾಗುವುದು ಎಂದು ಹೇಳಿದ್ದಾರೆ.