ಬೆಂಗಳೂರು: ಕಂಠೀರವ ಸ್ಟುಡಿಯೋದಲ್ಲಿ ಡಾ. ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಸಮಾಧಿಯ ಪಕ್ಕದಲ್ಲಿ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ ನೆರವೇರಿಸಲಾಗುತ್ತಿದೆ.
ಪತ್ನಿ ಅಶ್ವಿನಿ, ಪುತ್ರಿಯರಾದ ವಂದನಾ ಮತ್ತು ಧೃತಿ ಕಣ್ಣೀರಿಟ್ಟಿದ್ದಾರೆ. ತಾಯಿಯನ್ನು ತಬ್ಬಿಕೊಂಡು ಪುತ್ರಿಯರು ಅಳುತ್ತಿರುವ ದೃಶ್ಯ ಮನಕಲಕುವಂತಿದೆ.
ಪೊಲೀಸ್ ಬ್ಯಾಂಡ್ ರಾಷ್ಟ್ರಗೀತೆ ನುಡಿಸುವುದರೊಂದಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಪುನೀತ್ ಪಾರ್ಥಿವ ಶರೀರಕ್ಕೆ ಪೊಲೀಸರಿಂದ ಗೌರವವಂದನೆ ಸಲ್ಲಿಸಲಾಗಿದೆ. ಮೂರು ಸುತ್ತು ಕುಶಾಲತೋಪು ಹಾರಿಸಿ ಗೌರವ ವಂದನೆ ಸಲ್ಲಿಸಲಾಗಿದೆ.
ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಗೃಹಸಚಿವ ಆರಗ ಜ್ಞಾನೇಂದ್ರ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದಾರೆ.