ಬೆಂಗಳೂರು : ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ ಮುಂದೂಡಿಕೆಯಾಗಬಹುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಚುನಾವಣೆ ಸಂಬಂಧ ಸೂಕ್ತ ಸಮಯದಲ್ಲಿ ನಿರ್ಧಾರ ಮಾಡುತ್ತೇವೆ, ಮೀಸಲಾತಿ , ಕ್ಷೇತ್ರ ವಿಂಗಡಣೆಯಿಂದ ಚುನಾವಣೆ ಮುಂದಕ್ಕೆ ಹೋಗಿದೆ. ಡಿಲಿಮಿಟೇಶನ್ ಮುಗಿದರೆ ಕೋರ್ಟ್ ಗೆ ಸಲ್ಲಿಕೆ ಮಾಡುತ್ತಾರೆ, ಒಂದೇ ವೇಳೆ ಮೀಸಲಾತಿ ಆಗದಿದ್ರೆ ಚುನಾವಣೆ ಮುಂದಕ್ಕೆ ಹೋಗುತ್ತದೆ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಸಂಬಂಧ ಈಗಾಗಲೇ ಕ್ಷೇತ್ರ ಪುನರ್ವಿಂಗಡಣೆ ಕಾರ್ಯ ಪೂರ್ಣಗೊಂಡಿದೆ. ಅಲ್ಲದೆ, ಮೀಸಲು ನಿಗದಿ ಪ್ರಕ್ರಿಯೆ ಆರಂಭವಾಗಿದೆ ಎಂದು ರಾಜ್ಯ ಸರಕಾರ ಸೋಮವಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.ಈಗಾಗಲೇ ಕ್ಷೇತ್ರ ಪುನರ್ವಿಂಗಡಣೆ ಪೂರ್ಣಗೊಳಿಸಿ ಮೀಸಲು ನಿಗದಿ ಮಾಡಲಾಗುತ್ತಿದೆ. ನಾಲ್ಕು ವಾರಗಳ ಕಾಲಾವಕಾಶ ನೀಡಬೇಕು,” ಎಂದು ಸರ್ಕಾರದ ಪರ ವಕೀಲರು ಕೋರ್ಟ್ ಗೆ ಮನವಿ ಮಾಡಿದ್ದಾರೆ.