alex Certify ಮುಖ್ಯಮಂತ್ರಿ ಸ್ಥಾನ ಜಸ್ಟ್ ಮಿಸ್: ಬಹಿರಂಗವಾಗಿಯೇ ನೋವು ತೋಡಿಕೊಂಡ ಪರಮೇಶ್ವರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಖ್ಯಮಂತ್ರಿ ಸ್ಥಾನ ಜಸ್ಟ್ ಮಿಸ್: ಬಹಿರಂಗವಾಗಿಯೇ ನೋವು ತೋಡಿಕೊಂಡ ಪರಮೇಶ್ವರ್

ತುಮಕೂರು: 2013 ರ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದ್ದರೆ ನನಗೆ ಮುಖ್ಯಮಂತ್ರಿ ಆಗುವ ಅವಕಾಶವಿತ್ತು ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

ಕೊರಟಗೆರೆ ತಾಲೂಕಿನ ತೋವಿನಕೆರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2013ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿದ್ದರೆ ನನಗೆ ಸಿಎಂ ಆಗುವ ಅವಕಾಶವಿತ್ತು ಎಂದು ಹೇಳುವ ಮೂಲಕ ಬಹಿರಂಗವಾಗಿಯೇ ಸಿಎಂ ಆಗುವ ಅವಕಾಶ ಕೈತಪ್ಪಿದ ನೋವನ್ನು ಹೇಳಿಕೊಂಡಿದ್ದಾರೆ.

ಕ್ಷೇತ್ರದ ಜನ ನನ್ನನ್ನು ಎರಡು ಸಲ ಗೆಲ್ಲಿಸಿದ್ದಾರೆ. ಒಳ್ಳೆಯ ಸಂದರ್ಭದಲ್ಲಿ ಸೋಲಿಸಿದ್ದಾರೆ. ಬಹುಶಃ ನನ್ನ ಹಣೆಬರವೇ ಹಾಗೆ ಇರಬೇಕು. ಏನೇ ಆದರೂ ಕ್ಷೇತ್ರದ ಅಭಿವೃದ್ಧಿಗೆ ಕೆಲಸ ಮಾಡುತ್ತಿದ್ದೇನೆ ಎನ್ನುವ ತೃಪ್ತಿ ಇದೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...