
ತುಮಕೂರು: ನಾನು ಮುಂದಿನ ಮುಖ್ಯಮಂತ್ರಿ ಆಗಬೇಕು ಎಂದು ಯಾರು ಹೇಳಬೇಡಿ. ಇದರಿಂದ ಒಳಸಂಚು ಶುರುವಾಗುತ್ತದೆ ಎಂದು ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ ಹೇಳಿದ್ದಾರೆ.
ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಚಿಕ್ಕಗುಂಡಗಲ್ ಗ್ರಾಮದಲ್ಲಿ ಮಾತನಾಡುತ್ತಿದ್ದ ಅವರು ಮುಂದಿನ ಮುಖ್ಯಮಂತ್ರಿ ಎಂದು ಹೇಳದಂತೆ ಬೆಂಬಲಿಗರಲ್ಲಿ ಮನವಿ ಮಾಡಿದ್ದಾರೆ. ನೀವು ಎಲ್ಲಿ ಮುಖ್ಯಮಂತ್ರಿ ಎಂದು ಘೋಷಣೆ ಶುರು ಮಾಡಿದರೆ ಅಲ್ಲಿ ನನಗೆ ಹೊಡೆತ ಬೀಳುತ್ತದೆ ಎಂದು ಪರಮೇಶ್ವರ ಹೇಳಿದ್ದಾರೆ.
ನೀವು ಸಿಎಂ ವಿಚಾರವನ್ನು ಎತ್ತಿದರೆ ಬಹಳ ಕಷ್ಟವಾಗುತ್ತದೆ. ನಿಮ್ಮ ಆಶೀರ್ವಾದ, ಪರಮಾತ್ಮನ ಇಚ್ಛೆ ಇದ್ದರೆ ಮುಖ್ಯಮಂತ್ರಿ ಆಗುತ್ತೇನೆ ಎಂದು ಸಿಎಂ ಆಗುವ ಆಸೆ ವ್ಯಕ್ತಪಡಿಸಿದ್ದಾರೆ.