alex Certify ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ರಚನೆ: ಮುನಿಸಿಕೊಂಡಿದ್ದ ಪರಮೇಶ್ವರ್ ಪ್ರಮುಖ ಪಾತ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ರಚನೆ: ಮುನಿಸಿಕೊಂಡಿದ್ದ ಪರಮೇಶ್ವರ್ ಪ್ರಮುಖ ಪಾತ್ರ

ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ಸ್ಕ್ರೀನಿಂಗ್ ಕಮಿಟಿ ರಚನೆ ಮಾಡಲಾಗಿದೆ. ಮೋಹನ ಪ್ರಕಾಶ್ ನೇತೃತ್ವದಲ್ಲಿ ಎಐಸಿಸಿ ವತಿಯಿಂದ ಸ್ಕ್ರೀನಿಂಗ್ ಕಮಿಟಿ ರಚಿಸಲಾಗಿದೆ.

ಸ್ಕ್ರೀನಿಂಗ್ ಕಮಿಟಿ ಅಧಿಕೃತ ಸದಸ್ಯರಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್, ಎಂ.ಬಿ. ಪಾಟೀಲ್ ಹಾಗೂ ಡಾ.ಜಿ. ಪರಮೇಶ್ವರ್ ಅವರಿಗೆ ಸ್ಥಾನ ನೀಡಲಾಗಿದೆ. ಇವರೊಂದಿಗೆ ಮೂವರು ಸದಸ್ಯರನ್ನು ನೇಮಕ ಮಾಡಿದ್ದು, ರಾಜ್ಯದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ, ಐವರು ಎಐಸಿಸಿ ಕಾರ್ಯದರ್ಶಿಗಳಿಗೂ ಸ್ಥಾನ ನೀಡಲಾಗಿದೆ.

ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಮಾಜಿ ಡಿಸಿಎಂ ಪರಮೇಶ್ವರ್ ಮುನಿಸಿಕೊಂಡಿದ್ದರು. ಪ್ರಣಾಳಿಕೆ ವಿಚಾರದಲ್ಲಿ ಅಸಮಾಧಾನಗೊಂಡಿದ್ದರು. ಜವಾಬ್ದಾರಿ ನೀಡಿ ಪರಮೇಶ್ವರ್ ಅವರನ್ನು ವರಿಷ್ಠರು ಸಮಾಧಾನಪಡಿಸಿದ್ದಾರೆ. ಟಿಕೆಟ್ ಹಂಚಿಕೆಯಲ್ಲಿ ಪರಮೇಶ್ವರ್ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...