ಬೆಂಗಳೂರು: ಬೆಂಗಳೂರು -ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಅಪಘಾತ ತಡೆಗೆ ಪ್ಯಾಟ್ರೋಲಿಂಗ್ ವ್ಯವಸ್ಥೆ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಸುರೇಶ್ ಕುಮಾರ್ ಅವರ ಪ್ರಸ್ತಾಪಕ್ಕೆ ಸಚಿವರು ಉತ್ತರ ನೀಡಿ, ಅಪಘಾತ ನಿಯಂತ್ರಣಕ್ಕೆ 35 ಕಿಲೋ ಮೀಟರ್ ಗೆ ಒಂದರಂತೆ ಪ್ಯಾಟ್ರೋಲಿಂಗ್ ವ್ಯವಸ್ಥೆ ಜೊತೆಗೆ ವೇಗ ನಿಯಂತ್ರಣಕ್ಕೆ ಇಂಟರ್ ಸೆಪ್ಟರ್ ವಾಹನಗಳನ್ನು ನಿಯೋಜಿಸುವುದಾಗಿ ತಿಳಿಸಿದ್ದಾರೆ.
ಬೆಂಗಳೂರು –ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಅವೈಜ್ಞಾನಿಕ ತಿರುವು, ಸೂಚನೆ ಮತ್ತು ಎಚ್ಚರಿಕೆ ಫಲಕ ಇಲ್ಲದಿರುವುದು, ರಾತ್ರಿ ವೇಳೆ ಬೆಳಕಿನ ವ್ಯವಸ್ಥೆ ಇಲ್ಲದಿರುವುದು, ಹೆದ್ದಾರಿಯಲ್ಲಿ ನೀರು ನಿಲ್ಲುವುದು ಸೇರಿ ಅನೇಕ ಸಮಸ್ಯೆಗಳಿದ್ದು, ಇವುಗಳನ್ನು ಸರಿಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರಕ್ಕೆ ಪತ್ರ ಬರೆಯಲಾಗುವುದು ಎಂದು ಹೇಳಿದ್ದಾರೆ.