ದಾವಣಗೆರೆ: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ಐಆರ್ ಆಗಿದೆ. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮಾಹಿತಿ ನೀಡಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ಅವರು, ಈಶ್ವರಪ್ಪ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಸಂಸದ ಡಿ.ಕೆ. ಸುರೇಶ್ ಮತ್ತು ಶಾಸಕ ವಿನಯ್ ಕುಲಕರ್ಣಿ ಅವರು ರಾಷ್ಟ್ರದ್ರೋಹಿಗಳು. ಅವರ ರೀತಿ ದೇಶ ವಿಭಜನೆಯ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರುವಂತೆ ಪ್ರಧಾನಿಯವರಿಗೆ ಒತ್ತಾಯಿಸುತ್ತೇನೆ ಎಂದು ಈಶ್ವರಪ್ಪ ಹೇಳಿದ್ದರು.
ಈ ಕುರಿತಾಗಿ ಪ್ರತಿಕ್ರಿಯೆ ನೀಡಿದ ಪರಮೇಶ್ವರ್, ಈಶ್ವರಪ್ಪ ವಿರುದ್ಧ ಎಫ್ಐಆರ್ ಆಗಿದೆ. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.