
ಬೆಂಗಳೂರು: ಕಾನೂನಿಗಿಂತ ಯಾರೂ ದೊಡ್ಡವರಲ್ಲ, ಅಗತ್ಯವಾದರೆ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್.ಡಿ. ಕುಮಾರಸ್ವಾಮಿ ಪ್ರಕರಣದಲ್ಲಿ ರಾಜ್ಯಪಾಲರು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಕುಮಾರಸ್ವಾಮಿಯವರನ್ನು ಕಾಡುತ್ತಿದೆ. ಲೋಕಾಯುಕ್ತ ಎಸ್ಐಟಿ ತನಿಖಾ ವರದಿ ನೀಡಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿದ್ದರೂ ರಾಜ್ಯಪಾಲರಿಂದ ಯಾವುದೇ ಕ್ರಮವಾಗಿಲ್ಲ ಎಂದು ಹೇಳಿದ್ದಾರೆ.