ಮೈಸೂರು : ರಾಜ್ಯದ ವಿವಿಧ ಇಲಾಖೆಗಳಲ್ಲಿ ಎರಡೂವರೆ ಲಕ್ಷ ಹುದ್ದೆಗಳು ಖಾಲಿಯಿದ್ದು, ಇದನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.
ಅದೇ ರೀತಿ ಪೊಲೀಸ್ ಹುದ್ದೆಗಳ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಖಾಲಿ ಇರುವ ಪೊಲೀಸ್ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭವಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಪೊಲೀಸ್ ಇಲಾಖೆಯಲ್ಲಿ 15,000 ಪೊಲೀಸ್ ಹುದ್ದೆಗಳು ಖಾಲಿ ಇವೆ. ಈಗಾಗಲೇ ನೇಮಕಾತಿ ಆರಂಭವಾಗಿದೆ ಎಂದರು.
ಮೊದಲ ಹಂತದಲ್ಲಿ 4000 ಪೊಲೀಸ್ ಕಾನ್ಸ್ ಟೇಬಲ್ ಗಳ ಹಾಗೂ 400 ಪಿಎಸ್ಐ ಹುದ್ದೆ ಭರ್ತಿ ಮಾಡಲು ಮುಂದಾಗಿದ್ದೇವೆ ಎಂದು ತಿಳಿಸಿದರು. ಮೈಸೂರು ಅರಮನೆಗೆ ಕುಟುಂಬಸ್ಥರೊಂದಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ ನೀಡಿದ್ದಾರೆ