ತುಮಕೂರು: ತುಮಕೂರು ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ‘ನಮ್ಮ ಮೆಟ್ರೋ’ ವಿಸ್ತರಣೆಗೆ ಸಿದ್ಧತೆ ನಡೆದಿದೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಪಿಆರ್ ಗೆ ಸೂಚನೆ ನೀಡಿದ್ದು, ನಂತರ ರಾಜ್ಯ ಮತ್ತು ಕೇಂದ್ರ ಸರ್ಕಾರದ ಅನುಮತಿ ದೊರೆತಲ್ಲಿ ತುಮಕೂರಿಗೆ ನಮ್ಮ ಮೆಟ್ರೋ ವಿಸ್ತರಣೆ ಯೋಜನೆ ಕಾರ್ಯಕರ್ತವಾಗಲಿದೆ ಎಂದು ತಿಳಿಸಿದ್ದಾರೆ.
ತುಮಕೂರು ನಗರ ವ್ಯಾಪ್ತಿ ವೇಗವಾಗಿ ಬೆಳೆಯುತ್ತಿದೆ. ಬೆಂಗಳೂರಿನಿಂದ ತುಮಕೂರಿಗೆ ನಮ್ಮ ಮೆಟ್ರೋ ವಿಸ್ತರಿಸುವ ಚಿಂತನೆ ಇದ್ದು, ಮುಖ್ಯಮಂತ್ರಿಗಳು ಜನವರಿ 29ರಂದು ಜಿಲ್ಲೆಯ ಭೇಟಿ ನೀಡಿದಾಗ ಯೋಜನೆ ಅನುಷ್ಠಾನಕ್ಕೆ ಮನವಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.