ತುಮಕೂರು: ಶೀಘ್ರವೇ 15,000 ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಔರಾದ್ಕರ್ ವರದಿ ಜಾರಿ ಬಗ್ಗೆ ಪರಿಶೀಲನೆ ನಡೆಸಲಾಗುವುದು. 7ನೇ ವೇತನ ಆಯೋಗ ಜಾರಿ ಮಾಡಿದಲ್ಲಿ ಔರಾದ್ಕರ್ ವರದಿಯನ್ನು ಪ್ರತ್ಯೇಕವಾಗಿ ಜಾರಿಗೊಳಿಸುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ.
ಸದ್ಯದಲ್ಲಿ 15000 ಪೊಲೀಸ್ ಪೇದೆಗಳ ನೇಮಕಾತಿ ಮಾಡಿಕೊಳ್ಳಲಾಗುವುದು. ಪಿಎಸ್ಐ ನೇಮಕಾತಿ ಹಗರಣದ ತನಿಖೆ ನಡೆಯುತ್ತಿದೆ. ಮರು ಪರೀಕ್ಷೆಗೆ ಕೋರ್ಟ್ ತಡೆ ನೀಡಿದ್ದು, ಕಾನೂನು ತಜ್ಞರ ಸಲಹೆ ಪಡೆಯಲಾಗುವುದು ಎಂದು ಹೇಳಿದ್ದಾರೆ.