ಬೆಂಗಳೂರು: ಬಹುಕಾಲದ ಬೇಡಿಕೆಯಾಗಿರುವ ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ ಕಲ್ಪಿಸಲು ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಭರವಸೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ಸಂವಿಧಾನ ಬಳಗದ ವತಿಯಿಂದ ಬೆಂಗಳೂರಿನ ಟೌನ್ ಹಾಲ್ ನಲ್ಲಿ ನಡೆದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದಲಿತ ಸಮುದಾಯದ ಅನೇಕ ವರ್ಷಗಳ ಬೇಡಿಕೆಯಾಗಿರುವ ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ ಜಾರಿಗೊಳಿಸುವ ಸಂಬಂಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಘೋಷಿಸಿದ್ದಾರೆ.
ಖಾಸಗಿ ಕಂಪಾನಿಗಳಲ್ಲಿ ಮೀಸಲಾತಿ ಜಾರಿಗೆ ತಂದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾವಂತ ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ ಕಲ್ಪಿಸಬೇಕೆಂಬ ಬೇಡಿಕೆ ಬಹುಕಾಲದಿಂದಲೂ ಇತ್ತು. ಇದನ್ನು ಜಾರಿಗೆ ತರಲು ಶೀಘ್ರವೇ ಸರ್ಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ವಿವಿಧ ಇಲಾಖೆಗಳಲ್ಲಿ ಸುಮಾರು ಎರಡೂವರೆ ಲಕ್ಷ ಹುದ್ದೆ ಖಾಲಿ ಇವೆ. ಅದರಲ್ಲಿ 50 ರಿಂದ 60 ಸಾವಿರ ಹುದ್ದೆಗಳು ದಲಿತ ಸಮುದಾಯಕ್ಕೆ ಮೀಸಲಾಗಿದ್ದು, ಅವುಗಳನ್ನು ಭರ್ತಿ ಮಾಡಲಾಗುವುದು ಎಂದು ಹೇಳಿದ್ದಾರೆ.