ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷೆ ಮುಂದೂಡುವ ಬಗ್ಗೆ ಹೆಚ್ಚಿನ ಮನವಿ ಬಂದರೆ ಮುಂದೂಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಸೆಪ್ಟೆಂಬರ್ 22ರಂದು ಪಿಎಸ್ಐ ನೇಮಕಾತಿ ಪರೀಕ್ಷೆ ದಿನವೇ ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಯು ನಿಗದಿಯಾಗಿದೆ. ಒಂದು ವೇಳೆ ಪರೀಕ್ಷೆ ಮಂಡೂಡುವಂತೆ ಹೆಚ್ಚಿನ ಮನವಿ ಬಂದಲ್ಲಿ ಮುಂದೂಡಿಕೆ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಪಿಎಸ್ಐ ಪರೀಕ್ಷೆ ದಿನವೇ ಯುಪಿಎಸ್ಸಿ ಪರೀಕ್ಷೆ ನಿಗದಿಯಾಗಿರುವುದರಿಂದ ಈ ಬಗ್ಗೆ ಅಭ್ಯರ್ಥಿಗಳು ಪರೀಕ್ಷೆ ಮುಂದೂಡುವಂತೆ ಹೆಚ್ಚಿನ ಮನವಿ ಬಂದರೆ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ನಾನು ಈ ಹಿಂದೆ ಗೃಹ ಸಚಿವನಾಗಿದ್ದಾಗ ಸಾವಿರಾರು ಹುದ್ದೆಗಳ ನೇಮಕಾತಿ ಯಾವುದೇ ಅಡೆತಡೆ ಇಲ್ಲದೆ ನಡೆದಿತ್ತು. ಕಳೆದ ಸರ್ಕಾರದ ಅವಧಿಯಲ್ಲಿ ಪಿಎಸ್ಐ ಪರೀಕ್ಷಾ ಹಗರಣ ನಡೆದ ಕಾರಣದಿಂದ ನೇಮಕಾತಿ ವಿಳಂಬವಾಗಿದೆ. ಆದಷ್ಟು ಶೀಘ್ರವೇ ಫಲಿತಾಂಶ ಪ್ರಕಟಿಸಲು ಕ್ರಮ ವಹಿಸುವುದಾಗಿ ಹೇಳಿದ್ದಾರೆ.