ಬೆಂಗಳೂರು: ಕ್ಷೇತ್ರ ಮರು ವಿಂಗಡಣೆ, ಮೀಸಲಾತಿ ಪ್ರಕ್ರಿಯೆ ಮುಗಿದ ಕೂಡಲೇ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಮಾಡಬೇಕಿರುವ ಕಾರಣದಿಂದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ಮುಂದಕ್ಕೆ ಹೋಗಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಸಂಬಂಧ ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿ ನಿಗದಿ ಪ್ರಕ್ರಿಯ ಮುಗಿದ ನಂತರ ಕೋರ್ಟ್ ಗೆ ವರದಿ ಸಲ್ಲಿಸಲಾಗುತ್ತದೆ. ನಿಗದಿತ ಸಮಯಕ್ಕೆ ಮೀಸಲಾತಿ ನಿಗದಿಯಾಗದಿದ್ದರೆ ಹಳೆ ಮೀಸಲಾತಿ ಪ್ರಕಾರ ಚುನಾವಣೆ ನಡೆಸಬಹುದು. ಈಗಾಗಲೇ ನಾಲ್ಕು ಮಹಾನಗರ ಪಾಲಿಕೆ ಚುನಾವಣೆಗಳನ್ನು ಹಳೆ ಮೀಸಲಾತಿ ಪ್ರಕಾರವೇ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.