alex Certify ಕಾಂಗ್ರೆಸ್ ನ ನಾಗೇಂದ್ರ ಸೇರಿದಂತೆ ನಾಲ್ಕು ಶಾಸಕರು ಬಿಜೆಪಿಗೆ: ಸೋಮಶೇಖರ ರೆಡ್ಡಿ ಹೊಸ ಬಾಂಬ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ನ ನಾಗೇಂದ್ರ ಸೇರಿದಂತೆ ನಾಲ್ಕು ಶಾಸಕರು ಬಿಜೆಪಿಗೆ: ಸೋಮಶೇಖರ ರೆಡ್ಡಿ ಹೊಸ ಬಾಂಬ್

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಮೂರು -ನಾಲ್ಕು ಶಾಸಕರು ಬಿಜೆಪಿಗೆ ಬರಲಿದ್ದಾರೆ ಎಂದು ಶಾಸಕ ಸೋಮಶೇಖರ ರೆಡ್ಡಿ ತಿಳಿಸಿದ್ದಾರೆ.

ಬಳ್ಳಾರಿ ನಗರ ಬಿಜೆಪಿ ಶಾಸಕರಾದ ಜಿ. ಸೋಮಶೇಖರ ರೆಡ್ಡಿ ಸುದ್ದಿಗಾರರೊಂದಿಗೆ ಮಾತನಾಡಿ, ಈಗಷ್ಟೇ ಸಿನಿಮಾ ಶುರುವಾಗಿದ್ದು, ಮುಂದೆ ಯಾರು ಎಲ್ಲಿ ಹೋಗುತ್ತಾರೆ ಎಂಬುದು ತಿಳಿಯಲಿದೆ. ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು, ಅಲ್ಲಿಗೆ ಯಾರು ಹೋಗಲ್ಲವೆಂದು ತಿಳಿಸಿದ್ದಾರೆ.

ಬಿಜೆಪಿಯಿಂದ ಕಾಂಗ್ರೆಸ್ ಗೆ ಹೋಗಿದ್ದ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ವಲಸೆ ಹೋಗುವುದರ ಬಗ್ಗೆ ಮಾತನಾಡುವ ನೈತಿಕತೆ ಹೊಂದಿಲ್ಲ. ಮುಂದಿನ ವಿಧಾನಸಭೆ ಚುನಾವಣೆಗೆ ಮೊದಲೇ ನಾಗೇಂದ್ರ ಅವರೇ ಬಿಜೆಪಿ ಸೇರಲಿದ್ದಾರೆ ಎಂದು ಸೋಮಶೇಖರ ರೆಡ್ಡಿ ಹೇಳಿದ್ದಾರೆ.

ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾಗೇಂದ್ರ ಸೇರಿದಂತೆ ಜಿಲ್ಲೆಯ ಮೂರ್ನಾಲ್ಕು ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರಲಿದ್ದಾರೆ. ಬಳ್ಳಾರಿ ಜಿಲ್ಲೆಗೆ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಆಗಮಿಸುವುದರಿಂದ ಬಿಜೆಪಿಗೆ ಲಾಭವಾಗುತ್ತದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...