ನವದೆಹಲಿ: G20 ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬ್ರೆಜಿಲ್ ಅಧ್ಯಕ್ಷರಿಗೆ ಜಿ20 ಅಧ್ಯಕ್ಷ ಸ್ಥಾನದ ಜವಾಬ್ದಾರಿ ಹಸ್ತಾಂತರ ಮಾಡಿದ್ದಾರೆ.
ನವದೆಹಲಿಯಲ್ಲಿ ನಡೆದ G20 ಶೃಂಗಸಭೆಯ ‘ಒಂದು ಕುಟುಂಬ’ ಅಧಿವೇಶನದಲ್ಲಿ, ಜಿ20 ಅಧ್ಯಕ್ಷತೆ ವಹಿಸಿದ್ದ ಭಾರತ ಪ್ರಧಾನಿ ಮೋದಿ ಅವರು ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರಿಗೆ ಭಾರತದಿಂದ ಅಧ್ಯಕ್ಷ ಸ್ಥಾನವನ್ನು ಔಪಚಾರಿಕವಾಗಿ ಹಸ್ತಾಂತರಿಸಿದ್ದಾರೆ.
ಬ್ರೆಜಿಲ್ 2024 ರಲ್ಲಿ G20 ನೇತೃತ್ವ ವಹಿಸುತ್ತದೆ, ನಂತರ ಅದು 2025 ರಲ್ಲಿ G20 ಶೃಂಗಸಭೆಗಾಗಿ ದಕ್ಷಿಣ ಆಫ್ರಿಕಾಕ್ಕೆ ಅಧ್ಯಕ್ಷ ಸ್ಥಾನವನ್ನು ಹಸ್ತಾಂತರಿಸುತ್ತದೆ.