ಗದಗ : ನಗರದ ಹಳೇ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೋರ್ವನಿಗೆ ಚಾಕುವಿನಿಂದ ಇರಿದ ಘಟನೆಯ ವಿಡಿಯೋ ವೈರಲ್ ಆಗಿದೆ.
ಸುನೀಲ್ ಎಂಬಾತನಿಗೆ ದುಷ್ಕರ್ಮಿಯೋರ್ವ ಚಾಕುವಿನಿಂದ ಇರಿದಿದ್ದು, ಆತ ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದರೂ ಬಿಡದೇ ಮತ್ತೆ ಚಾಕುವಿನಿಂದ ಚುಚ್ಚಿ ಕ್ರೌರ್ಯ ಮೆರೆದಿದ್ದಾನೆ. ಹಲ್ಲೆಯ ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಹಣಕಾಸಿನ ವಿಷಯಕ್ಕೆ ಈ ಗಲಾಟೆ ನಡೆದಿದೆ ಎನ್ನಲಾಗಿದೆ. ರಕ್ತದ ಮಡುವಿನಲ್ಲೇ ಸುನೀಲ್ ಒದ್ದಾಡಿದ್ದು, ನಂತರ ಆತನನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ತಿಳಿದು ಬಂದಿದೆ.