
ಗದಗ: ಬೈಕ್ ಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಮೂವರು ಸವಾರರು ಸಾವನ್ನಪ್ಪಿದ್ದಾರೆ. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮದ ಬಳಿ ಘಟನೆ ಭೀಕರ ಅಪಘಾತ ನಡೆದಿದೆ.
ಬೈಕಿನಲ್ಲಿ ಹೋಗುತ್ತಿದ್ದ ಅಣ್ಣ, ತಂಗಿ, ಮಗು ಮೃತಪಟ್ಟಿದ್ದಾರೆ. ಮೊಹಮ್ಮದ್ ಶಫಿ(34), ಬಿಬಿಜಹಾರ್(22), ಒಂದು ವರ್ಷದ ಮಗು ಮೊಹಮ್ಮದ್ ಅಜೀಬ್ ಮೃತಪಟ್ಟವರು ಎಂದು ಹೇಳಲಾಗಿದೆ. ಘಟನೆಯ ಬಳಿಕ ಸ್ಥಳದಲ್ಲೇ ಗೂಡ್ಸ್ ವಾಹನ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.