alex Certify ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಕಾರ್ ಗೆ ಬೆಂಕಿ: ಮೂವರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಕಾರ್ ಗೆ ಬೆಂಕಿ: ಮೂವರ ಸಾವು

ಗದಗ: ಗದಗ ಜಿಲ್ಲೆಯ ರೋಣ ಪಟ್ಟಣದ ಅಬ್ಬಿಗೇರಿ ರಸ್ತೆಯ ಸಾರಿಗೆ ಡಿಪೋ ಬಳಿ ಶನಿವಾರ ಸಂಜೆ ಭೀಕರ ಅಪಘಾತ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿದ ಕಾರ್ ಮರಕ್ಕೆ ಡಿಕ್ಕಿ ಹೊಡೆದು, ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಗದಗದ ದರ್ಶನ್(19), ಮೆಹಬೂಬ್(25) ಹಾಗೂ ಕರ್ನೂಲು ಮೂಲದ ಶೌಕತ್(22) ಮೃತಪಟ್ಟವರು ಎಂದು ಹೇಳಲಾಗಿದೆ. ಕಾರ್ ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಡೀಸೆಲ್ ಸೋರಿಕೆಯಾಗಿ ಬೆಂಕಿ ತಗುಲಿದ್ದು, ಸಂಪೂರ್ಣ ಸುಟ್ಟು ಕರಕಲಾಗಿದೆ. ಇದೇ ದಾರಿಯಲ್ಲಿ ಸಾಗುತ್ತಿದ್ದ ಲಾರಿ ಚಾಲಕ ಧೈರ್ಯ ತೋರಿ ಕಾರ್ ನಿಂದ ನಾಲ್ವರನ್ನು ಹೊರಗೆ ತಂದಿದ್ದಾರೆ. ರೋಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇವರು ಅಪಘಾತದಲ್ಲಿ ಗಾಯಗೊಂಡಿದ್ದ ಸ್ನೇಹಿತನನ್ನು ನೋಡಿಕೊಂಡು ಗದಗಕ್ಕೆ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...