ಗದಗ: ಡಿವೈಡರ್ ಗೆ ಕಾರ್ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಗದಗ ತಾಲೂಕಿನ ಹುಲಕೋಟಿ ಗ್ರಾಮದ ಬಳಿ ನಡೆದಿದೆ.
ಮಹಮ್ಮದ್ ಜಾಹಿದ್(18), ಸಂಜೀವ್ ಗಿರಡ್ಡಿ(15) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಆಶೀಸ್ ಗೂಡೂರ್, ಸಪ್ತಗಿರಿ ಅವರನ್ನು ಗದಗದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹುಲಕೋಟಿಯಿಂದ ಗದಗಕ್ಕೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಗದಗ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.