ಗದಗ: ಮೊಹರಂ ಹಬ್ಬ ಆಚರಣೆ ವೇಳೆ ಕ್ಷುಲ್ಲಕ ಕಾರಣಕ್ಕೆ ಯುವಕರಿಬ್ಬರಿಗೆ ಚಾಕುವಿನಿಂದ ಇರಿದ ಘಟನೆ ಗದಗ ತಾಲೂಕಿನ ಮಲ್ಲಸಮುದ್ರದಲ್ಲಿ ನಡೆದಿದೆ.
ದಾದಾಪೀರ್ ಹೊಸಮನಿ, ಮುಸ್ತಾಕ್ ಹೊಸಮನಿ ಅವರಿಗೆ ಚಾಕುವಿನಿಂದ ಇರಿಯಲಾಗಿದೆ. ಆರ್.ಎಸ್.ಎಸ್. ಕಾರ್ಯಕರ್ತ ಮತ್ತು ಗುಂಪಿನಿಂದ ಕೃತ್ಯವೆಸಗಿದ ಆರೋಪ ಕೇಳಿ ಬಂದಿದೆ. ಮೊಹರಂ ಆಚರಣೆಯ ವೇಳೆ ಕಾಲು ತುಳಿದಿದ್ದಕ್ಕೆ ಚಾಕುವಿನಿಂದ ಇರಿಯಲಾಗಿದೆ ಎಂದು ಆರೋಪಿಸಲಾಗಿದೆ. ಯುವಕ ದಾದಾಪೀರ್ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಗದಗ ಜಿಮ್ಸ್ ಆಸ್ಪತ್ರೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕ ದೇವರಾಜು ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.