ಗದಗ ಜಿಲ್ಲೆಯಲ್ಲಿ ವ್ಯಾಕ್ಸಿನೇಷನ್ ನಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಲಾಗಿದೆ. ಗದಗ ಜಿಲ್ಲೆಯಲ್ಲಿ ಶೇಕಡ 100 ರಷ್ಟು ವ್ಯಾಕ್ಸಿನೇಷನ್ ಕಾರ್ಯ ಪೂರ್ಣಗೊಂಡಿದೆ. ಈ ಮೂಲಕ ರಾಜ್ಯದಲ್ಲಿ ಸಂಪೂರ್ಣ ಲಸಿಕೆ ನೀಡಿದ ಮೊದಲ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
15-17 ವರ್ಷದ ಮಕ್ಕಳಲ್ಲಿ ಶೇ. 100 ಫಸ್ಟ್ ಡೋಸ್ ಗುರಿ ಸಾಧಿಸಿದ ಕರ್ನಾಟಕದ ಮೊದಲ ಜಿಲ್ಲೆ ಗದಗ. ಕರ್ನಾಟಕದ ಮಕ್ಕಳಲ್ಲಿ ಒಟ್ಟಾರೆ ಮೊದಲ ಡೋಸ್ ವ್ಯಾಪ್ತಿ ಶೇ. 72 ರಷ್ಟು ಆಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.