ಚಲಿಸುವ ರೈಲಿಗೆ ತಲೆಕೊಟ್ಟು ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳದ ಕಿಡದಾಳ್ ರೈಲ್ವೆ ಗೇಟ್ ಬಳಿ ನಡೆದಿದೆ. ಬಳ್ಳಾರಿ ಮೂಲದ ವಿದ್ಯಾರ್ಥಿನಿ ತೇಜಶ್ರೀ(22) ಮೃತಪಟ್ಟವರು ಎನ್ನಲಾಗಿದೆ.
ಮೂರು ತಿಂಗಳಿನಿಂದ ಖಿನ್ನತೆಗೆ ಒಳಗಾಗಿದ್ದ ವಿದ್ಯಾರ್ಥಿನಿ ತೇಜಶ್ರೀ ಹೌಸ್ಮನ್ ಶಿಪ್ ನಲ್ಲಿದ್ದರು. ನಿನ್ನೆ ಸಂಜೆ ಗೂಡ್ಸ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗದಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.