
ಗದಗ: ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಮುಳಗುಂದ ನಾಕಾ ಬಳಿ ನಡೆದಿದೆ.
ಬೈಕ್ ಸ್ಕಿಡ್ ಆಗಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬಸ್ ಚಕ್ರದಡಿ ಸಿಲುಕಿ ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಈರಪ್ಪ ಕಣಗಿನಹಾಳ ಮೃತ ದುರ್ದೈವಿ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.