
ಗದಗ: ಕಿಡಿಗೇಡಿಗಳು ಮೇವಿನ ಬಣವಿ, ರೈತರ ಹೊಟ್ಟಿಗೆ ಬೆಂಕಿ ಹಚ್ಚಿರುವ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ.
ಊರ ಹೊರವಲಯದ ಬಯಲು ಪ್ರದೇಶದಲ್ಲಿ ಗ್ರಾಮಸ್ಥರು ಒಂದೇ ಕಡೆ 40ಕ್ಕೂ ಹೆಚ್ಚು ಮೇವಿನ ಬಣವಿ, ಹೊಟ್ಟು ರಾಶಿಹಾಕಿದ್ದರು. ಇದ್ದಕ್ಕಿದ್ದಂತೆ ಮೇವಿನ ಬಣವಿಗೆ ಬೆಂಕಿ ಹೊತ್ತಿಕೊಂಡಿದೆ. ರೈತರು ಸ್ಥಳಕ್ಕಾಗಮಿಸುವಷ್ಟರಲ್ಲಿ 40ಕ್ಕೂ ಹೆಚ್ಚು ಮೇವಿನ ಬಣವಿ, ಕೃಷಿ ಸಲಕರಣೆಗಳು ಬೆಂಕಿಗಾಹುತಿಯಾಗಿದ್ದವು.
ರೈತರು ತಮ್ಮ ಜಾನುವಾರುಗಳಿಗೆ ಸಂಗ್ರಹಿಸಿಟ್ಟಿದ್ದ ಮೇವಿನ ಬಣವಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಯರೋ ಕಿಡಿಗೇಡಿಗಳು ಬೆಂಕಿಯಿಟ್ಟಿದ್ದಾರೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ. ಲಕ್ಷಾಂತರ ರೂಪಾಯಿ ಮೌಲ್ಯದ ಮೇವು ಬೆಂಕಿಗಾಹುತಿಯಾಗಿದ್ದು, ಜಾನುವಾರುಗಳ ಪಾಡೇನು ಎಂದು ರೈತರು ಕಣ್ಣೀರಿಟ್ಟಿದ್ದಾರೆ.