alex Certify BIG NEWS: ಮಕ್ಕಳ ಪಾಲನಾ ಕೇಂದ್ರದಲ್ಲಿದ್ದ ಬಾಲಕಿ ಗರ್ಭಿಣಿ; ಮೂರು ಮಕ್ಕಳ ತಂದೆಯಿಂದಲೇ ಕೃತ್ಯ; ಆರೋಪಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಕ್ಕಳ ಪಾಲನಾ ಕೇಂದ್ರದಲ್ಲಿದ್ದ ಬಾಲಕಿ ಗರ್ಭಿಣಿ; ಮೂರು ಮಕ್ಕಳ ತಂದೆಯಿಂದಲೇ ಕೃತ್ಯ; ಆರೋಪಿ ಅರೆಸ್ಟ್

ಗದಗ: ಮಕ್ಕಳ ಪಾಲನಾ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ ಸಂತ್ರಸ್ತ ಬಾಲಕಿಯೊಬ್ಬಳು ಗರ್ಭಿಣಿಯಾಗಿದ್ದು, ಮೂರು ಮಕ್ಕಳ ತಂದೆಯೇ ನೀಚ ಕೃತ್ಯವೆಸಗಿರುವ ಘಟನೆ ಗದಗದಲ್ಲಿ ನಡೆದಿದೆ.

ಮಕ್ಕಳ ಪಾಲನಾ ಕೇಂದ್ರದಲ್ಲಿದ್ದ ಬಾಲಕಿ ಆಧಾರ್ ಕಾರ್ಡ್ ಮಾಡಿಸಲು ಮನೆಗೆ ಹೋಗಿದ್ದಳು. ಬಳಿಕ ವಾಪಸ್ ಬರುವಾಗ ಪರಿಚಯಸ್ಥ ವ್ಯಕ್ತಿಯೊಂದಿಗೆ ಬಂದಿದ್ದಳು. ಮನೆಯಿಂದ ವಾಪಸ್ ಆಗುವಾಗ ಪರಿಚಯಸ್ಥ ವ್ಯಕ್ತಿಯೇ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ.

35 ವರ್ಷದ ಮೂರು ಮಕ್ಕಳ ತಂದೆಯೇ ಈ ನೀಚ ಕೃತ್ಯವೆಸಗಿದ್ದಾನೆ. ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ವಿಷಯ ಬಹಿರಂಗವಾಗಿದೆ. ಆತಂಕಗೊಂಡ ಪಾಲನಾ ಕೇಂದ್ರದ ಸಿಬ್ಬಂದಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...