alex Certify ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಹೊಗಳಿ ಅಚ್ಚರಿ ಮೂಡಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಹೊಗಳಿ ಅಚ್ಚರಿ ಮೂಡಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಆರ್ಥಿಕ ಸುಧಾರಣೆಗಳಿಗಾಗಿ ದೇಶವು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಋಣಿಯಾಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಬಡ ಜನರಿಗೆ ಅದರ ಪ್ರಯೋಜನಗಳನ್ನು ಒದಗಿಸುವ ಉದ್ದೇಶದಿಂದ ಭಾರತಕ್ಕೆ ಉದಾರ ಆರ್ಥಿಕ ನೀತಿಯ ಅಗತ್ಯವಿದೆ ಎಂದು ನಿತಿನ್ ಗಡ್ಕರಿ ಅವರು ಮಂಗಳವಾರ ಟಿಐಒಎಲ್ ಅವಾರ್ಡ್ಸ್ 2022 ಈವೆಂಟ್‌ನಲ್ಲಿ ಮಾತನಾಡುತ್ತಾ ಹೇಳಿದರು.

1991 ರಲ್ಲಿ ವಿತ್ತ ಸಚಿವರಾಗಿ ಮನಮೋಹನ್ ಸಿಂಗ್ ಅವರು ಪ್ರಾರಂಭಿಸಿದ ಆರ್ಥಿಕ ಸುಧಾರಣೆಗಳು ಭಾರತಕ್ಕೆ ಹೊಸ ದಿಕ್ಕನ್ನು ನೀಡಿತು ಮತ್ತು ಅದು ಉದಾರ ಆರ್ಥಿಕತೆಗೆ ನಾಂದಿ ಹಾಡಿತು ಎಂದು ಅವರು ಹೇಳಿದರು.

“ಲಿಬರಲ್ ಎಕಾನಮಿ ಕೆ ಕರಣ್ ದೇಶ್ ಕೋ ನಯೀ ದಿಶಾ ಮಿಲಿ, ಉಸ್ಕೆ ಲಿಯೇ ಮನಮೋಹನ್ ಸಿಂಗ್ ಕಾ ದೇಶ್ ರೀನಿ ಹೈ (ಹೊಸ ದಿಕ್ಕನ್ನು ನೀಡಿದ ಉದಾರೀಕರಣಕ್ಕಾಗಿ ದೇಶವು ಮನಮೋಹನ್ ಸಿಂಗ್ ಅವರಿಗೆ ಋಣಿಯಾಗಿದೆ),” ಎಂದು ಗಡ್ಕರಿ ಹೇಳಿದರು.

1990 ರ ದಶಕದ ಮಧ್ಯಭಾಗದಲ್ಲಿ ಅವರು ಮಹಾರಾಷ್ಟ್ರದಲ್ಲಿ ಸಚಿವರಾಗಿದ್ದಾಗ ಮಾಜಿ ಪ್ರಧಾನಿಯವರು ಪ್ರಾರಂಭಿಸಿದ ಆರ್ಥಿಕ ಸುಧಾರಣೆಗಳಿಂದಾಗಿ ಮಹಾರಾಷ್ಟ್ರದಲ್ಲಿ ರಸ್ತೆಗಳನ್ನು ನಿರ್ಮಿಸಲು ಹಣವನ್ನು ಸಂಗ್ರಹಿಸಲು ಸಾಧ್ಯವಾಯಿತು ಎಂದು ಅವರು ನೆನಪಿಸಿಕೊಂಡರು.

ಗಡ್ಕರಿ ಹೇಳಿಕೆಯನ್ನು ಸ್ವಾಗತಿಸಿರುವ ಕಾಂಗ್ರೆಸ್, ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮತ್ತು ಇತರ ಬಿಜೆಪಿ ನಾಯಕರ ನಡುವಿನ ಭಿನ್ನಾಭಿಪ್ರಾಯಗಳನ್ನು ಪ್ರದರ್ಶಿಸಲು ಪ್ರಯತ್ನಿಸಿದೆ. ಅವರು ತಮ್ಮ ಪ್ರತಿಸ್ಪರ್ಧಿಗಳನ್ನು ಗೌರವಿಸುವ ರಾಜಕೀಯದಲ್ಲಿ “ಸುಸಂಸ್ಕೃತರು” ಎಂದು ಹೇಳಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ಅವರು ಬುಧವಾರ ಈ ಬಗ್ಗೆ ಟ್ವೀಟ್ ಮಾಡಿದ್ದು “ಸೆಪ್ಟೆಂಬರ್ 16 ರಂದು ಮೇಡಮ್ ವಿತ್ತ ಸಚಿವರು 1991 ರ ಸುಧಾರಣೆಗಳನ್ನು ‘ಅರ್ಧ ಬೇಯಿಸಿದ’ ಎಂದು ಹೇಳಿದ್ದರು. ನಿನ್ನೆ, ಮಾಸ್ಟರ್ ಚೆಫ್ ಗಡ್ಕರಿ ಅವರು 1991 ರ ಆರ್ಥಿಕ ಸುಧಾರಣೆಗಳಿಗಾಗಿ ಡಾ. ಮನಮೋಹನ್ ಸಿಂಗ್ ಅವರಿಗೆ ಸಂಪೂರ್ಣ ಗೌರವವನ್ನು ಸಲ್ಲಿಸುವ ಮೂಲಕ ಅದನ್ನು ಸಂಪೂರ್ಣವಾಗಿ ಮತ್ತು ಚೆನ್ನಾಗಿ ಬೇಯಿಸಿದ್ದಾರೆ. ವಿತ್ತಸಚಿವರು ಈಗ ಅದನ್ನು ಅರಗಿಸಿಕೊಳ್ಳಬಹುದು ಎಂದು ನಾನು ಭಾವಿಸುತ್ತೇನೆ ಎಂದು ತಿರುಗೇಟು ನೀಡಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...