
ದಾವಣಗೆರೆ: ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿರುವ ಘಟನೆ ದಾವಣಗೆರೆಯ ಮ್ಯಾಂಗೋ ಹೋಟೆಲ್ ನಲ್ಲಿ ನಡೆದಿದೆ.
ಮ್ಯಾಂಗೋ ಹೋಟೆಲ್ ನಲ್ಲಿ ಜೂಜಾಟ ನಡೆಯುತ್ತಿದೆ ಎಂಬ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಇಂದು ಏಕಾಏಕಿ ದಾಳಿ ನಡೆಸಿದ್ದಾರೆ. ದಾಳಿ ವೇಳೆ 24.86 ಲಕ್ಷ ರೂಪಾಯಿ ಹಣ ಜಪ್ತಿ ಮಾಡಲಾಗಿದೆ.
ಎಸ್ ಪಿ ಉಮಾ ಪ್ರಕಾಶ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ದಾಳಿ ವೇಳೆ ಹಲವರು ತಪ್ಪಿಸಿಕೊಂಡಿದ್ದಾರೆ. ದಾವಣಗೆರೆ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.