ಬೆಂಗಳೂರು: ಇಸ್ಪೀಟ್ ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ ಪೆಪ್ಟರ್ ಸ್ಪ್ರೇ ಮಾಡಿ ಮಚ್ಚಿನಿಂದ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.
ಇಸ್ಪೀಟ್ ಅಡ್ಡಿ ನಡೆಸುತ್ತಿದ್ದ ಕ್ಯಾಟ್ ರಾಜನ ಸಹಚರರು ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ಎಸಿಪಿ ಚಂದನ್ ಮಾರ್ಗದರ್ಶನದಲ್ಲಿ ಪೊಲೀಸರು ದಾಳಿ ನಡೆಸಿದ ವೇಳೆ ಪೊಲೀಸರ ಮೇಲೆ ಪೆಪ್ಪರ್ ಸ್ಪ್ರೇ ಮಾಡಲಾಗಿದೆ. 30 ಜನ ಲಕ್ಷ ಲಕ್ಷ ಬಾಜಿ ಕಟ್ಟಿ ಜೂಜಾಟ ನಡೆಸುತ್ತಿದ್ದರು. ದಾಳಿ ಮಾಡಿದಾಗ ಪೆಪ್ಪರ್ ಸ್ಪ್ರೇ ಮಾಡಿ ಮಚ್ಚಿನಿಂದ ಹಲ್ಲೆಗೆ ಯತ್ನಿಸಲಾಗಿದೆ. ಸದ್ಯ ಪೊಲೀಸರು 13 ಆರೋಪಿಗಳನ್ನು ಬಂಧಿಸಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.