alex Certify ಗಣಪತಿ ವಿಸರ್ಜನೆ ಹಿನ್ನೆಲೆ : ಇಂದಿನಿಂದ 3 ದಿನ ಕಲಬುರಗಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಣಪತಿ ವಿಸರ್ಜನೆ ಹಿನ್ನೆಲೆ : ಇಂದಿನಿಂದ 3 ದಿನ ಕಲಬುರಗಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ

ಕಲಬುರಗಿ : ಕಲಬುರಗಿ ಜಿಲ್ಲೆಯಾದ್ಯಂತ ಗಣೇಶ ಚತುರ್ಥಿ ನಿಮಿತ್ಯ ಪ್ರತಿಷ್ಠಾಪಿಸಲಾಗಿರುವ 9 ಮತ್ತು 11 ದಿನಗಳ ಅವಧಿಯ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವ ನಿಟ್ಟಿನಲ್ಲಿ ಸೆ. 27ರ ಬೆಳಿಗ್ಗೆ 6 ಗಂಟೆಯಿಂದ ಸೆ.30ರ‌ ಬೆಳಿಗ್ಗೆ 6 ಗಂಟೆ ವರೆಗೆ 1965ರ ಕರ್ನಾಟಕ ಅಬಕಾರಿ ಕಾಯ್ದೆ-1965ರ ಕಲಂ 21ರಂತೆ ಕಲಬುರಗಿ ನಗರ ಮತ್ತು ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಢಾಧಿಕಾರಿ ಬಿ.ಫೌಜಿಯಾ ತರನ್ನುಮ್ ಆದೇಶ ಹೊರಡಿಸಿದ್ದಾರೆ.

ಈ ಅವದಿಯಲ್ಲಿ ಜಿಲ್ಲೆಯಾದ್ಯಂತ ಎಲ್ಲಾ ತರಹದ ಮದ್ಯಪಾನ, ಸರಾಯಿ, ಶೇಂಧಿ, ಸ್ವದೇಶಿ ಹಾಗೂ ವಿದೇಶಿ ಮಧ್ಯಪಾನ ಮತ್ತು ಮಾದಕ ವಸ್ತುಗಳ ಮಾರಾಟ, ಸಾಗಾಟ ಹಾಗೂ ಮಧ್ಯಪಾಪವನ್ನು ನಿಷೇಧಿಸಿದಲ್ಲದೆ ಬಾರ್ ಹಾಗೂ ರೆಸ್ಟೋರೆಂಟ್ ಮುಚ್ಚುವಂತೆ ಸಹ ಆದೇಶಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...