BIG NEWS: ಶಿವಮೊಗ್ಗ: ರಾತ್ರೋರಾತ್ರಿ ಮಹಾತ್ಮಾ ಗಾಂಧಿ ಪ್ರತಿಮೆ ಧ್ವಂಸಗೊಳಿಸಿದ ಕಿಡಿಗೇಡಿಗಳು

ಶಿವಮೊಗ್ಗ: ಮಹಾತ್ಮಾ ಗಾಂಧಿ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಗ್ರಾಮದಲ್ಲಿ ನಡೆದಿದೆ.

ಹೊಳೆಹೊನ್ನೂರಿನ ಪ್ರಮುಖ ವೃತ್ತದಲ್ಲಿ 18 ವರ್ಷಗಳ ಹಿಂದೆಯೇ ಗಾಂಧಿ ಪ್ರತಿಮೆಯನ್ನು ನಿರ್ಮಿಸಲಾಗಿತ್ತು. ತಡರಾತ್ರಿ ಕಿಡಿಗೇಡಿಗಳು ಈ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ. ಕಿಡಿಗೇಡಿಗಳ ಕೃತ್ಯಕ್ಕೆ ಗ್ರಾಮಸ್ಥರು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read