alex Certify ನಾಳೆ ಶಾಲೆ, ಕಾಲೇಜಿಗೆ ರಜೆ: ಹಿಂದೂ ಮಹಾಸಭಾ ಗಣಪತಿ ಶೋಭಾಯಾತ್ರೆಯಲ್ಲಿ ಲಕ್ಷಾಂತರ ಜನ ಭಾಗಿ, ಚಿತ್ರದುರ್ಗದಲ್ಲಿ ಪೊಲೀಸ್ ಭದ್ರತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಶಾಲೆ, ಕಾಲೇಜಿಗೆ ರಜೆ: ಹಿಂದೂ ಮಹಾಸಭಾ ಗಣಪತಿ ಶೋಭಾಯಾತ್ರೆಯಲ್ಲಿ ಲಕ್ಷಾಂತರ ಜನ ಭಾಗಿ, ಚಿತ್ರದುರ್ಗದಲ್ಲಿ ಪೊಲೀಸ್ ಭದ್ರತೆ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ನಾಳೆ ಹಿಂದೂ ಮಹಾಸಭಾ ಗಣಪತಿ ಶೋಭಾಯಾತ್ರೆ ನಡೆಯಲಿದೆ. ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಮಹಾಗಣಪತಿಯ ವಿಸರ್ಜನಾ ಪೂರ್ವ ಮೆರವಣಿಗೆ ಚಳ್ಳಕೆರೆ ಗೇಟ್ ನಿಂದ ಚಂದ್ರವಳ್ಳಿ ಕೆರೆಯವರೆಗೆ ನಡೆಯಲಿದೆ.

ಶೋಭಾಯಾತ್ರೆಯಲ್ಲಿ 1.5 ಲಕ್ಷಕ್ಕೂ ಹೆಚ್ಚು ಜನ ಸೇರುವ ಸಾಧ್ಯತೆ ಇದೆ. ಚಿತ್ರದುರ್ಗ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ ಕೈಗೊಳ್ಳಲಾಗಿದೆ. ಚಿತ್ರದುರ್ಗ ನಗರ ವ್ಯಾಪ್ತಿಯ ಶಾಲೆ, ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ.

8 ಕೆ.ಎಸ್‌.ಆರ್‌.ಪಿ. ತುಕಡಿ, 8 ಡಿಎಆರ್ ತುಕಡಿ ಸೇರಿದಂತೆ ಒಂದು ಸಾವಿರಕ್ಕೂ ಅಧಿಕ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಚಿತ್ರದುರ್ಗ ಮುಖ್ಯ ರಸ್ತೆಯ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರಶುರಾಮ ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...