ತುಮಕೂರು: ಗಣೇಶ ಮೂರ್ತಿ ವಿಸರ್ಜನೆ ವೇಳೆ ದುರಂತವೊಂದು ಸಂಭವಿಸಿದ್ದು, ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತುರವೆಕೆರೆಯ ಮಾರನಹಟ್ಟಿ ಬಳಿಯ ರಂಗನಹಟ್ಟಿ ಕೆರೆಯಲ್ಲಿ ನಡೆದಿದೆ.
ತಂದೆ, ಮಗ ಹಾಗೂ ಇನ್ನೋರ್ವ ಸೇರಿ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ತಂದೆ ರೇವಣ್ಣ, ಪುತ್ರ ಶರತ್ ಹಾಗೂ ದಯಾನಂದ್ ಮೃತ ದುರ್ದೈವಿಗಳು. ಗ್ರಾಮದ ಗಣೇಶ ಮೂರ್ತಿ ವಿಸರ್ಜನೆ ವೇಳೆ ಈ ದುರಂತ ಸಂಭವಿಸಿದೆ.
ಸ್ಥಳಕ್ಕೆ ದಂಡಿನಶಿವರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತದೇಹಗಳಿಗಾಗಿ ಕೆರೆಯಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ.