ಬೆಂಗಳೂರು: ಗಣೇಶೋತ್ಸವಕ್ಕೆ ಸರ್ಕಾರದಿಂದ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಮನರಂಜನೆ ಕಾರ್ಯಕ್ರಮಗಳಿಗೆ ಅವಕಾಶ ಇರುವುದಿಲ್ಲ. ನಿಗದಿತ ಸ್ಥಳಗಳಲ್ಲಿ ಮಾತ್ರ ಗಣಪತಿ ವಿಸರ್ಜನೆಗೆ ಅವಕಾಶ ನೀಡಲಾಗಿದೆ.
ಸರ್ಕಾರದಿಂದ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ ನೀಡಲಾಗಿದ್ದು, ಮೂರು ದಿನ ಮಾತ್ರ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಲಾಗಿದೆ. ಆರ್ಕೆಸ್ಟ್ರಾ, ಸಂಗೀತ ಕಾರ್ಯಕ್ರಮಗಳಿಗೆ ಯಾವುದೇ ಅವಕಾಶ ಇರುವುದಿಲ್ಲ. ಅದೇ ರೀತಿ ಯಾವುದೇ ಮೆರವಣಿಗೆ, ಮನರಂಜನೆ ಕಾರ್ಯಕ್ರಮಗಳಿಗೆ ಅವಕಾಶ ಇರುವುದಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.