ಬೆಂಗಳೂರು: ಗಣಪತಿ ಹಬ್ಬ ಆಚರಣೆಯ ಒತ್ತಡಕ್ಕೆ ಮಣಿದ ಸರ್ಕಾರದಿಂದ ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಈ ಕುರಿತಾಗಿ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.
ಮನರಂಜನೆ ಕಾರ್ಯಕ್ರಮಗಳಿಗೆ ಅವಕಾಶ ಇರುವುದಿಲ್ಲ. ನಿಗದಿತ ಸ್ಥಳಗಳಲ್ಲಿ ಮಾತ್ರ ಗಣಪತಿ ವಿಸರ್ಜನೆಗೆ ಅವಕಾಶ ನೀಡಲಾಗಿದೆ.
ಸರ್ಕಾರದಿಂದ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ ನೀಡಲಾಗಿದ್ದು, ಮೂರು ದಿನ ಮಾತ್ರ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಲಾಗಿದೆ. ಆರ್ಕೆಸ್ಟ್ರಾ, ಸಂಗೀತ ಕಾರ್ಯಕ್ರಮಗಳಿಗೆ ಯಾವುದೇ ಅವಕಾಶ ಇರುವುದಿಲ್ಲ. ಅದೇ ರೀತಿ ಯಾವುದೇ ಮೆರವಣಿಗೆ, ಮನರಂಜನೆ ಕಾರ್ಯಕ್ರಮಗಳಿಗೆ ಅವಕಾಶ ಇರುವುದಿಲ್ಲ ಎನ್ನಲಾಗಿದೆ.