ಬೆಂಗಳೂರು: ಕೊರೋನಾ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಸಾರ್ವಜನಿಕ ಗಣೇಶೋತ್ಸವಕ್ಕೆ ಬ್ರೇಕ್ ಹಾಕಲಾಗಿದೆ. ಆದರೆ, ಈ ಬಾರಿ ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೇಕೆಂಬ ಒತ್ತಾಯ ಕೇಳಿಬರುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶೋತ್ಸವ ಆಚರಣೆಗೆ ನಿಷೇಧ ಹೇರದೇ ಅವಕಾಶ ನೀಡಬೇಕೆಂಬ ಅಭಿಪ್ರಾಯಕ್ಕೆ ಕೇಳಿ ಬಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು.
ಗಣೇಶೋತ್ಸವ ಧಾರ್ಮಿಕ ಕಾರ್ಯಕ್ರಮವಾಗಿರದೇ ಅನೇಕರಿಗೆ ಆದಾಯ ತಂದುಕೊಡುವ ಹಬ್ಬವಾಗಿದೆ. ಹೂವು, ಹಣ್ಣು ಮಾರಾಟಗಾರರು, ಅಲಂಕಾರಿಕ ಸಾಮಗ್ರಿ, ವಾದ್ಯಗೋಷ್ಠಿ, ಸಂಗೀತಗಾರರಿಗೆ ಅನುಕೂಲವಾಗುತ್ತದೆ. ಆರ್ಥಿಕ ಚೇತರಿಕೆಗೆ ದಾರಿಯಾಗಲಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿಬಂದಿದೆ. ಆದರೆ, ಕೊರೋನಾ ಕಾರಣದಿಂದಾಗಿ ಸೀಮಿತ ಸಂಖ್ಯೆಯ ಜನರೊಂದಿಗೆ ಹಬ್ಬ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.