
ಬೆಂಗಳೂರು: ಕೊರೋನಾ ನಡುವೆ ಈ ಬಾರಿ ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸೆ. 5 ರಂದು ಸಿಎಂ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ನಡೆಸಲಾಗುವುದು.
ಸಚಿವ ಆರ್. ಅಶೋಕ್ ಈ ಬಗ್ಗೆ ಮಾಹಿತಿ ನೀಡಿ, ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೇಕೆಂಬ ಒತ್ತಾಯ ಕೇಳಿಬರುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶೋತ್ಸವ ಆಚರಣೆಗೆ ನಿಷೇಧ ಹೇರದೇ ಅವಕಾಶ ನೀಡಬೇಕೆಂಬ ಅಭಿಪ್ರಾಯಕ್ಕೆ ಕೇಳಿ ಬಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸೆ. 5 ರಂದು ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಕೊರೋನಾ ಪರಿಸ್ಥಿತಿ ಆಧರಿಸಿ ಮಾರ್ಗಸೂಚಿ ಅನುಸರಿಸಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗುವುದು. ಸೆ. 5 ರ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.