ಬೆಂಗಳೂರು: ಗೌರಿ ಗಣೇಶ ಹಬ್ಬಕ್ಕೆ ಊರಿಗೆ ಹೋಗುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆ ವಿಶೇಷ ರೈಲುಗಳ ಕಾರ್ಯಾಚರಣೆ ನಡೆಸಲು ನಿರ್ಧರಿಸಿದೆ.
ಗಣೇಶ ಚತುರ್ಥಿ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಕಡಿಮೆ ಮಾಡಲು ಬೆಂಗಳೂರಿನಿಂದ ಬೆಳಗಾವಿ ಮತ್ತು ವಿಜಯಪುರ ಮಾರ್ಗಗಳಲ್ಲಿ ವಿಶೇಷ ರೈಲುಗಳ ಕಾರ್ಯಾಚರಣೆ ನಡೆಸಲಾಗುವುದು.
ಸೆಪ್ಟೆಂಬರ್ 5 ರಂದು ಸಂಜೆ 7:30ಕ್ಕೆ ಯಶವಂತಪುರದಿಂದ ಹೊರಡುವ ರೈಲು ಸೆಪ್ಟೆಂಬರ್ 6ರಂದು ಬೆಳಗ್ಗೆ 7.15ಕ್ಕೆ ಬೆಳಗಾವಿಗೆ ತಲುಪಲಿದೆ. ಬೆಳಗ್ಗೆ 8.45 ಕ್ಕೆ ಬೆಳಗಾವಿಯಿಂದ ಹೊರಟು ರಾತ್ರಿ 80 ಗಂಟೆಗೆ ಯಶವಂತಪುರ ತಲುಪಲಿದೆ.
ಸೆಪ್ಟಂಬರ್ 6ರಂದು ರಾತ್ರಿ 10:15ಕ್ಕೆ ಯಶವಂತಪುರದಿಂದ ಹೊರಡುವ ರೈಲು ಸೆಪ್ಟೆಂಬರ್ 7ರಂದು ಬೆಳಗ್ಗೆ 10:15ಕ್ಕೆ ಬೆಳಗಾವಿ ತಲುಪುತ್ತದೆ. ಸೆಪ್ಟೆಂಬರ್ 8ರಂದು ಸಂಜೆ 5:30ಕ್ಕೆ ಬೆಳಗಾವಿಯಿಂದ ಹೊರಟು ಮರುದಿನ ಬೆಳಗ್ಗೆ 4.30 ಕ್ಕೆ ಯಶವಂತಪುರ ತಲುಪುತ್ತದೆ. ಈ ರೈಲುಗಳು ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ಹುಬ್ಬಳ್ಳಿ, ಧಾರವಾಡ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲುಗಡೆ ಇರುತ್ತದೆ. 22 ಬೋಗಿಗಳನ್ನು ಹೊಂದಿರುತ್ತವೆ.
ಎಸ್.ಎಂ.ವಿ.ಟಿ. ಬೆಂಗಳೂರು ನಿಲ್ದಾಣದಿಂದ ಸೆಪ್ಟೆಂಬರ್ 5 ಮತ್ತು 7ರಂದು ರಾತ್ರಿ 9ಕ್ಕೆ ಹೊರಡುವ ವಿಶೇಷ ಎಕ್ಸ್ಪ್ರೆಸ್ ರೈಲು ಸೆಪ್ಟೆಂಬರ್ 6 ಮತ್ತು 8ರಂದು ಮಧ್ಯಾಹ್ನ 2.05ಕ್ಕೆ ವಿಜಯಪುರ ತಲುಪುತ್ತದೆ.
ಸೆಪ್ಟೆಂಬರ್ 6 ಮತ್ತು 8ರಂದು ವಿಜಯಪುರದಿಂದ ಹೊರಡುವ ರೈಲು ಸೆಪ್ಟಂಬರ್ 7 ಮತ್ತು 9ರಂದು ಬೆಳಗ್ಗೆ 11.15ಕ್ಕೆ ಎಸ್.ಎಂ.ವಿ.ಟಿ. ತಲುಪಲಿದೆ. ಈ ರೈಲುಗಳು ಚಿಕ್ಕಬಾಣಾವರ, ತುಮಕೂರು, ಅರಸಿಕೆರೆ, ಬೀರೂರು, ಚಿಕ್ಕಜಾಜೂರು, ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ ಕಂಟೋನ್ಮೆಂಟ್, ತೋರಣಗಲ್ಲು, ಹೊಸಪೇಟೆ, ಕೊಪ್ಪಳ, ಗದಗ, ಬಾದಾಮಿ, ಬಾಗಲಕೋಟೆ, ಆಲಮಟ್ಟಿ ನಿಲ್ದಾಣಗಳಲ್ಲಿ ನಿಲುಗಡೆ ಇರುತ್ತದೆ,
ಈ ರೈಲುಗಳು ಒಟ್ಟು 18 ಬೋಗಿಗಳನ್ನು ಹೊಂದಿರುತ್ತವೆ. ಮುಂಗಡ ಬುಕಿಂಗ್ ಮತ್ತು ವೇಳಾಪಟ್ಟಿ ಮಾಹಿತಿಗೆ www.enquiry.gov.in ಜಾಲತಾಣಕ್ಕೆ ಭೇಟಿ ನೀಡಬಹುದು. 139ಕ್ಕೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಹೇಳಲಾಗಿದೆ.