alex Certify ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ: ಪಾರ್ಕ್ ನಲ್ಲಿದ್ದ ಯುವತಿ ಎಳೆದೊಯ್ದು ಕಾರ್ ನಲ್ಲೇ ಗ್ಯಾಂಗ್ ರೇಪ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ: ಪಾರ್ಕ್ ನಲ್ಲಿದ್ದ ಯುವತಿ ಎಳೆದೊಯ್ದು ಕಾರ್ ನಲ್ಲೇ ಗ್ಯಾಂಗ್ ರೇಪ್

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದೆ. ಕಾರ್ ನಲ್ಲಿಯೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದು, ಕೋರಮಂಗಲ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಾ. 25 ರಂದು ರಾತ್ರಿ 10 ಗಂಟೆಗೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ದುರುಳರ ಅಟ್ಟಹಾಸಕ್ಕೆ ಸಿಲಿಕಾನ್ ಸಿಟಿ ಬೆಚ್ಚಿಬಿದ್ದಿದೆ.

ಸ್ನೇಹಿತನ ಜೊತೆಗೆ ಪಾರ್ಕ್ ನಲ್ಲಿ ಕುಳಿತಿದ್ದ ಯುವತಿಯ ಬಳಿ ಬಂದು ಗಲಾಟೆ ಮಾಡಿದ ಕಾಮುಕರು ಸ್ನೇಹಿತನನ್ನು ಬೆದರಿಸಿ ಯುವತಿಯನ್ನು ಎಳೆದುಕೊಂಡು ಹೋಗಿದ್ದಾರೆ. ಕಾರ್ ನಲ್ಲಿ ಯುವತಿಯನ್ನು ಅಪಹರಿಸಿ ನೀಚ ಕೃತ್ಯವೆಸಗಿದ್ದಾರೆ. ದೊಮ್ಮಲೂರು, ಇಂದಿರಾ ನಗರ, ಆನೇಕಲ್, ನೈಸ್ ರಸ್ತೆ ಸೇರಿದಂತೆ ಹಲವೆಡೆ ಕಾರ್ ನಲ್ಲಿ ಸುತ್ತಾಟ ನಡೆಸಿ ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಮಾರ್ಚ್ 26ರಂದು ಬೆಳಿಗ್ಗೆ 4 ಗಂಟೆಗೆ ಯುವತಿಯನ್ನು ಮನೆಯ ಬಳಿ ಬಿಟ್ಟು ಪರಾರಿಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...