ಕೊಪ್ಪಳ: ವಿದೇಶಿ ಮಹಿಳೆ ಮತ್ತು ಹೋಮ್ಸ್ಟೇ ಮಾಲೀಕ ಮಹಿಳೆ ಮೇಲೆ ಗ್ಯಾಂಗರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಗಂಗಾವತಿ ನ್ಯಾಯಾಲಯ ಮೂವರು ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಮಾರ್ಚ್ 6ರಂದು ರಾತ್ರಿ 11 ಗಂಟೆಗೆ ಕಾಮುಕರು ಪ್ರವಾಸಿಗರ ಮೇಲೆ ಹಲ್ಲೆ ನಡೆಸಿ ಇಸ್ರೇಲ್ ಮೂಲದ ಪ್ರವಾಸಿ ಮಹಿಳೆ ಹಾಗೂ ಹೋಂ ಸ್ಟೇ ಮಾಲಕಿ ಮೇಲೆ ಕಾಮುಕರು ಗ್ಯಾಂಗ್ ರೇಪ್ ನಡೆಸಿದ್ದರು, ಇದೇ ವೇಳೆ ಹೊರ ರಾಜ್ಯಗಳಿಂದ ಬಂದಿದ್ದ ನಾಲ್ವರು ಪ್ರವಾಸಿಗರ ಮೇಲೆ ಹಲ್ಲೆ ನಡೆಸಿದ್ದರು.
ಆರೋಪಿಗಳಾದ ಮಲ್ಲೇಶ್, ಚೇತನಸಾಯಿ, ಶರಣಬಸವನನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು ಸೋಮವಾರ ರಾತ್ರಿ ಮೂವರು ಆರೋಪಿಗಳನ್ನು ನ್ಯಾಯಾಲಯ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಮೂವರು ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.