ಮೈಸೂರು: ಮೈಸೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಮಡಿಕೇರಿ ಮೂಲದ ಯುವತಿ ಠಾಣೆಗೆ ಖುದ್ದಾಗಿ ಹಾಜರಾಗಿ ದೂರು ನೀಡಿದ್ದಾರೆ.
ಮೈಸೂರಿನ ವಿಜಯನಗರ ಠಾಣೆ ಪೊಲೀಸರಿಗೆ ಯುವತಿ ದೂರು ನೀಡಿದ್ದಾರೆ. ಭಾನುವಾರ ಘಟನೆ ನಡೆದಿದೆ ಎಂದು ಯುವತಿ ದೂರು ನೀಡಿದ್ದಾರೆ. ಯುವತಿ ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಉಳಿದುಕೊಂಡಿದ್ದು, ಆಕೆಯ ಪರಿಚಿತರಿಂದಲೇ ಕೃತ್ಯ ನಡೆದಿದೆ ಎನ್ನುವ ಮಾಹಿತಿ ಗೊತ್ತಾಗಿದೆ. ಪೊಲೀಸರು ಯುವತಿಯಿಂದ ಮಾಹಿತಿ ಪಡೆದಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.