ನವದೆಹಲಿ: ಗುಜರಾತ್ ನ ರಾಜ್ಕೋಟ್ ನಗರದಲ್ಲಿ ಮೂವರು ವ್ಯಕ್ತಿಗಳು ಎಂಟು ವರ್ಷದ ಬಾಲಕಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ನಡೆಸಿ ಕಲ್ಲಿನಿಂದ ಹೊಡೆದು ಕೊಂದಿದ್ದಾರೆ ಎಂದು ವರದಿಯಾಗಿದೆ.
ಶುಕ್ರವಾರ ಅಪಹರಣ ಮಾಡಿದ ಆರೋಪಿಗಳು ಶನಿವಾರ ಬಾಲಕಿಯನ್ನು ಕೊಂದಿದ್ದಾರೆ. ನಂತರ ಎಲ್ಲಾ ಆರೋಪಿಗಳನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಈ ಮೂವರು ಯುವತಿಯ ತಂದೆಗೆ ಪರಿಚಿತರು ಎಂದು ನಂತರ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿ ಶುಕ್ರವಾರ ನಾಪತ್ತೆಯಾಗಿದ್ದು, ಭಾನುವಾರ ಆಕೆಯ ಶವ ಪತ್ತೆಯಾಗಿದೆ. ನಗರದ ರೈಲ್ವೆ ನಿಲ್ದಾಣದ ಹಿಂಭಾಗದ ಖಾಲಿ ಪ್ರದೇಶದಲ್ಲಿ ಆಕೆಯ ಮೃತ ದೇಹ ಪತ್ತೆಯಾಗಿದೆ.
ಆರೋಪಿಗಳನ್ನು ಗುರುತಿಸಲು ತನಿಖಾಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಗಳನ್ನು ಬಳಸಿದ್ದಾರೆ. ಈ ಮೂವರನ್ನು ನಗರ ಅಪರಾಧ ವಿಭಾಗ ಬಂಧಿಸಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.