ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಲಿಫ್ಟ್ ನೀಡುವ ನೆಪದಲ್ಲಿ ಮಹಿಳೆಯೊಬ್ಬಳನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನಡೆದಿದೆ.
ಬಾರ್ಮರ್ ಜಿಲ್ಲಾ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯ ಬಲದೇವ್ ನಗರದ ನಿರ್ಜನ ಪ್ರದೇಶದಲ್ಲಿ ಘಟನೆ ನಡೆದಿದೆ. ಮಹಿಳೆ ತನ್ನ 3 ವರ್ಷದ ಮಗುವಿನೊಂದಿಗೆ ಊರಿಗೆ ಹೊರಟಿದ್ದ ವೇಳೆ ಅದೇ ಮಾರ್ಗವಾಗಿ ಬಂದಿದ್ದ ಅಪರಿಚಿತರು ಲಿಫ್ಟ್ ನೀಡುವುದಾಗಿ ಕರೆದುಕೊಂಡು ಹೋಗಿದ್ದಾರೆ. ನಿರ್ಜನ ಪ್ರದೇಶಕ್ಕೆ ತೆರಳುತ್ತಿದ್ದಂತೆ ಮಗುವಿನ ಕುತ್ತಿಗೆಗೆ ಚಾಕು ಹಿಡಿದು ಬೆದರಿಸಿದ ಆರೋಪಿಗಳು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾರೆ.
ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆ ಕಳುಹಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ.