ಬೆಂಗಳೂರು : ಬೆಂಗಳೂರಲ್ಲಿ ಪುಂಡರ ಹಾವಳಿ ಮಿತಿ ಮೀರುತ್ತಿದೆ. ಬಾರ್ ಗೆ ಬಂದವರ ಮೇಲೆ ಬಿಯರ್ ಬಾಟಲ್ ನಿಂದ ಹಲ್ಲೆ ನಡೆಸಿದ ಘಟನೆ ಮಹಾಲಕ್ಷ್ಮೀ ಲೇಔಟ್ ನ ಸ್ಪೂರ್ತಿ ಬಾರ್ ನಲ್ಲಿ ನಡೆದಿದೆ.
ರಾತ್ರಿ 11 ಗಂಟೆ ಸುಮಾರಿಗೆ ಈ ಒಂದು ಘಟನೆ ನಡೆದಿದೆ. ಬಾರ್ ನಲ್ಲಿ ಕುಳಿತು ಎಣ್ಣೆ ಹೊಡೆಯುತ್ತಿದ್ದ ಇಬ್ಬರ ಮೇಲೆ ಮೂವರು ದುಷ್ಕರ್ಮಿಗಳು ಬಿಯರ್ ಬಾಟಲ್ ನಿಂದ ಹಲ್ಲೆ ನಡೆಸಿ ಎಸ್ಕೇಪ್ ಆಗಿದ್ದಾರೆ.
ಹಲ್ಲೆ ಮಾಡಿದವರು ಯಾರು..? ಯಾಕೆ ಈ ಕೃತ್ಯ ಎಸಗಿದರು ಎಂಬುದು ತಿಳಿದು ಬಂದಿಲ್ಲ. ಘಟನೆ ನಡೆದ ಬಾರ್ ಗೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.