ಹಾಸನ: ಗಂಗಾ ಕಲ್ಯಾಣ ಯೋಜನೆ ಫಲಾನುಭವಿಗಳಿಗೆ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಿಹಿ ಸುದ್ದಿ ನೀಡಿದ್ದಾರೆ.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಜನೆಯ ಫಲಾನುಭವಿಗಳ ಖಾತೆಗೆ ನೇರ ಹಣ ವರ್ಗಾವಣೆ ಮಾಡುವುದಾಗಿ ಭರವಸೆ ನೀಡಿದ್ದಾರೆ.
ಗಂಗಾ ಕಲ್ಯಾಣ ಯೋಜನೆ ವಿಳಂಬ ತಪ್ಪಿಸುವ ಉದ್ದೇಶದಿಂದ ಇನ್ನು ಮುಂದೆ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುವುದು. ಶೀಘ್ರದಲ್ಲಿಯೇ ಯೋಜನೆ ರೂಪಿಸಲಾಗುವುದು ಎಂದು ಹೇಳಿದ್ದಾರೆ.
ಕಾಮಗಾರಿ ಗುತ್ತಿಗೆ ಪಡೆದವರ ವಿರುದ್ಧ ಗುತ್ತಿಗೆ ಸಿಗದವರು ಕೋರ್ಟ್ ಗೆ ಹೋಗಿ ತಡೆಯಾಜ್ಞೆ ತರುವುದು ಮೊದಲಾದ ಕಾರಣಗಳಿಂದ ಯೋಜನೆ ವಿಳಂಬವಾಗುತ್ತಿದೆ. ಇದನ್ನು ತಡೆಯುವ ಉದ್ದೇಶದಿಂದ ಗುತ್ತಿಗೆ ನೀಡುವ ಬದಲಿಗೆ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಒದಗಿಸಲಾಗುವುದು ಎಂದು ಹೇಳಿದ್ದಾರೆ.