alex Certify ತಡರಾತ್ರಿ ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯೆ ಆಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಡರಾತ್ರಿ ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯೆ ಆಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಗರ್ಭಿಣಿಯೊಬ್ಬರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಆಂಬುಲೆನ್ಸ್ ನಲ್ಲಿ ಹೆರಿಗೆಯಾಗಿದೆ. ಗಂಗಾವತಿ ತಾಲೂಕಿನ ಜೀರಾಳ ಕಲ್ಗುಡಿ ಸಮೀಪ ತಡರಾತ್ರಿ ಘಟನೆ ನಡೆದಿದೆ.

ಜೀರಾಳ ಕಲ್ಗುಡಿ ಗ್ರಾಮದ ಸೋಮಕ್ಕ ತುಂಬು ಗರ್ಭಿಣಿಯಾಗಿದ್ದು, ರಾತ್ರಿ ವೇಳೆ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಮಾಹಿತಿ ಬಂದ ಹಿನ್ನೆಲೆಯಲ್ಲಿ ಆಂಬುಲೆನ್ಸ್ ಚಾಲಕ ಹಾಗೂ ತುರ್ತು ವೈದ್ಯಕೀಯ ಸಹಾಯಕ ದೇವಣ್ಣ ಸ್ಥಳಕ್ಕೆ ತೆರಳಿ ಸೋಮಕ್ಕ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗಮಧ್ಯೆ ಹೆರಿಗೆ ನೋವು ಜಾಸ್ತಿಯಾಗಿದೆ.

ಆಶಾ ಕಾರ್ಯಕರ್ತೆ ಜಯಮ್ಮ ಮತ್ತು ಶಿವಣ್ಣ ಬಡಿಗೇರ ಸಹಕಾರದೊಂದಿಗೆ ಅಂಬುಲೆನ್ಸ್ ವಾಹನದಲ್ಲಿಯೇ ಸುರಕ್ಷಿತವಾಗಿ ಹೆರಿಗೆ ಮಾಡಿಸಲಾಗಿದೆ. ತಾಯಿ ಮತ್ತು ಮಗುವನ್ನು ಬಳಿಕ ಗಂಗಾವತಿ ಉಪವಿಭಾಗ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರೂ ಆರೋಗ್ಯವಾಗಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...