ಮೈಸೂರಿನ ಚಾಮುಂಡಿ ಬೆಟ್ಟದ ಸಮೀಪದಲ್ಲಿ ನಾಗರಿಕ ಸಮಾಜ ತಲೆತಗ್ಗಿಸುವಂತಹ ದುರ್ಘಟನೆ ಸಂಭವಿಸಿದೆ. ಸ್ನೇಹಿತನ ಜೊತೆ ಚಾಮುಂಡಿ ಬೆಟ್ಟಕ್ಕೆ ತೆರಳಿದ ವಿದ್ಯಾರ್ಥಿನಿಯ ಮೇಲೆ ನಾಲ್ವರು ದುಷ್ಕರ್ಮಿಗಳ ಗುಂಪು ಸಾಮೂಹಿಕ ಅತ್ಯಾಚಾರ ನಡೆಸಿದೆ.
ನಿನ್ನೆ ಮುಸ್ಸಂಜೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು ಇಂದು ಪ್ರಕರಣ ಬೆಳಕಿಗೆ ಬಂದಿದೆ. ಸಂಜೆ ತನ್ನ ಸ್ನೇಹಿತನ ಜೊತೆಯಲ್ಲಿ ಚಾಮುಂಡಿ ಬೆಟ್ಟದ ಸಮೀಪದಲ್ಲಿರುವ ಲಲಿತಾದ್ರಿಪುರದ ಬಳಿಗೆ ಹೊರ ರಾಜ್ಯದ ವಿದ್ಯಾರ್ಥಿನಿ ತೆರಳಿದ್ದಳು. ಇವರಿಬ್ಬರನ್ನು ಹಿಂಬಾಲಿಸಿ ಬಂದ ದುಷ್ಕರ್ಮಿಗಳ ಗುಂಪು ಮೊದಲು ಇವರಿಗೆ ಇನ್ನಿಲ್ಲದ ಕಾಟ ಕೊಟ್ಟಿದ್ದಾರೆ. ಬಳಿಕ ವಿದ್ಯಾರ್ಥಿನಿಯನ್ನು ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.
ಪ್ರಕರಣ ಸಂಬಂಧ ಈವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಆದರೆ ಆಲನಹಳ್ಳಿ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲಾಗಿದ್ದು ಪೊಲೀಸರು ಈಕೆಯ ಬಳಿ ಹೇಳಿಕೆಗಳನ್ನು ದಾಖಲಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.