alex Certify ಮಧ್ಯಪ್ರದೇಶ: ಬಾವಿಗೆ ಬಿದ್ದು ಮೃತಪಟ್ಟವರ ಸಂಖ್ಯೆ 11 ಕ್ಕೆ ಏರಿಕೆ, ಪರಿಹಾರ ಘೋಷಿಸಿದ ಮೋದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಧ್ಯಪ್ರದೇಶ: ಬಾವಿಗೆ ಬಿದ್ದು ಮೃತಪಟ್ಟವರ ಸಂಖ್ಯೆ 11 ಕ್ಕೆ ಏರಿಕೆ, ಪರಿಹಾರ ಘೋಷಿಸಿದ ಮೋದಿ

ನವದೆಹಲಿ: ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಬಾವಿಗೆ ಬಿದ್ದ ಬಾಲಕಿ ರಕ್ಷಿಸುವ ಸಂದರ್ಭದಲ್ಲಿ ಉಂಟಾದ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 11 ಕ್ಕೆ ಏರಿಕೆಯಾಗಿದೆ.

ವಿದಿಶಾ ಜಿಲ್ಲಾ ಕೇಂದ್ರದಿಂದ 50 ಕಿ.ಮೀ. ದೂರದ ಗಂಜ್ ಬಸೋದಾದಲ್ಲಿ ಮೂರು ದಿನಗಳ ಹಿಂದೆ ಬಾಲಕಿಯನ್ನು ರಕ್ಷಿಸುವ ಸಂದರ್ಭದಲ್ಲಿ ಮಣ್ಣು ಕುಸಿದು 30 ಮಂದಿ ಬಾವಿಗೆ ಬಿದ್ದಿದ್ದರು. ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿ ಹಲವರನ್ನು ರಕ್ಷಿಸಿದ್ದರು. ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 11 ಕ್ಕೆ ಏರಿಕೆಯಾಗಿದೆ.

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...